ಕರಾವಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ನೀಡಲು ನಿರ್ಧಾರ, ಅನುಮತಿಗಾಗಿ ಕೇಂದ್ರಕ್ಕೆ ಪ್ರಸ್ತಾವನೆ

0
7
ಮಂಗಳೂರು: ಮತ್ತು ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನ ಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್‌ ಕತ್ತಿ ಅಧ್ಯಕ್ಷತೆಯಲ್ಲಿ ಗುರುವಾರ ಮಹತ್ವದ ಸಭೆ ನಡೆಯಿತು.

ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್‌ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಭತ್ತದ ತಳಿಗಳಾದ ಎಂಒ4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರಕಾರದ ಅನುಮತಿಗಾಗಿ ಸಭೆ ಸುದೀರ್ಘ ಚರ್ಚೆ ನಡೆಸಿ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಂಡಿತು.

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆ ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್‌ ಭತ್ತದ ಪೂರೈಕೆ ಆಗಬೇಕಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು.

ಕೇಂದ್ರದ ಅನುಮತಿ ಪಡೆದು ನವೆಂಬರ್‌ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ಹಂಚಲು ಕ್ರಮಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾಗಿ ಪೂರೈಕೆ ಆಗಬಹುದಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ ಇತರ ಜಿಲ್ಲೆಗಳಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷ ಕಿರಣ್‌ ಕುಮಾರ್‌ ಕೊಡ್ಗಿ ತಿಳಿಸಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here