ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣ, ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆ

0
4
ಬೆಂಗಳೂರು: ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣಗಳು ಇಳಿಕೆಯಾಗಿವೆ. ಶುಕ್ರವಾರ 16,068 ಕೋವಿಡ್‌ ಕೇಸ್‌ಗಳು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ. 1,50,610 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರವೂ ಶೇ. 10.66ಕ್ಕೆ ಕುಸಿದಿರುವುದು ಉತ್ತಮ ಬೆಳವಣಿಗೆಯಾಗಿದೆ.

ಮತ್ತೊಂದು ಆಶಾದಾಯಕ ಬೆಳವಣಿಗೆಯೆಂದರೆ ಸಾವಿನ ಸಂಖ್ಯೆ ಕುಸಿದಿರುವುದು. ಶುಕ್ರವಾರ 364 ಜನರು ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಅಸುನೀಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 30,895ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 206 ಜನರು ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದರೆ, ಮೈಸೂರಿನಲ್ಲಿ 18, ಕೋಲಾರದಲ್ಲಿ 10 ಸೋಂಕಿತರು ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಜನರು ಸೋಂಕಿನಿಂದ ಅಸುನೀಗಿದ್ದಾರೆ.

ಎಲ್ಲೆಡೆ ಸೋಂಕು ಇಳಿಕೆ
ಬೆಂಗಳೂರಿನಲ್ಲಿ ಹೊಸದಾಗಿ 3,221 ಹೊಸ ಪ್ರಕರಣಗಳು ದೃಢಪಟ್ಟಿದ್ದರೆ, ,ಮೈಸೂರಿನಲ್ಲಿ 1,265 ಕೇಸ್‌ಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಸಾವಿರಕ್ಕಿಂತ ಕಡಿಮೆ ಪ್ರಕರಣಗಳಷ್ಟೆ ಪತ್ತೆಯಾಗಿದ್ದು, 17 ಜಿಲ್ಲೆಗಳಲ್ಲಿ 500ಕ್ಕಿಂತ ಕಡಿಮೆ ಕೇಸ್‌ಗಳು ಬೆಳಕಿಗೆ ಬಂದಿವೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 22,316 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಇಲ್ಲಿಯವರೆಗೆ 23,58,412 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2,80,186ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 1,31,179 ಸಕ್ರಿಯ ಪ್ರಕರಣಗಳಿದ್ದರೆ, ಬೆಳಗಾವಿ, ಹಾಸನ, ಮತ್ತು ತುಮಕೂರಿನಲ್ಲಿ ಮಾತ್ರ 10 ಸಾವಿರಕ್ಕಿಂತ ಹೆಚ್ಚು ಆಕ್ಟಿವ್‌ ಕೇಸ್‌ಗಳಿವೆ.

ವೇಗ ಪಡೆದುಕೊಂಡ ಲಸಿಕೆ ಅಭಿಯಾನ
ಒಂದಿ ದಿನ ಅಂತರದಲ್ಲಿ ರಾಜ್ಯದಲ್ಲಿ ಒಟ್ಟು 2,35,197 ಡೋಸ್‌ ಲಸಿಕೆ ನೀಡಲಾಗಿದೆ. 18-44 ವರ್ಷದ ಒಳಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳುತ್ತಿದ್ದು, ಒಟ್ಟು ಲಸಿಕೆ ಪಡೆದುಕೊಂಡವರ ಸಂಖ್ಯೆ 1,46,42,946 ಡೋಸ್‌ಗೆ ಏರಿಕೆಯಾಗಿದೆ.

LEAVE A REPLY

Please enter your comment!
Please enter your name here